
ಕೊಪ್ಪಳ: ಜಿಲ್ಲಾಧಿಕಾರಿ ಕಾರ್ಯಾಲಯದ ವತಿಯಿಂದ ಇಂದು ಕೊಪ್ಪಳ ಆಡಳಿತ ಭವನದಲ್ಲಿ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದ್ದು, ವಿವಿಧ ಇಲಾಖೆಗಳ ಸಾಧಕ ಅಧಿಕಾರಿಗಳಿಗೆ ಗೌರವ ಸಲ್ಲಿಸಲಾಯಿತು.2024 ಹಾಗೂ 2025ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಒಟ್ಟು 35 ಮಂದಿ ಅಧಿಕಾರಿಗಳು ಆಯ್ಕೆಯಾಗಿದ್ದು, ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ವಿಶೇಷವಾಗಿ ಯಲಬುರ್ಗಾ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಗಮನಾರ್ಹವಾಗಿದೆ.ಪ್ರಶಸ್ತಿಗೆ ಆಯ್ಕೆಯಾದ ಪ್ರಮುಖರು:ಶ್ರೀ ನಾಗೇಶ್ – ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಯಲಬುರ್ಗಾಶ್ರೀ ಶಿವಶಂಕರ್ ಕರ್ಡಕಲ್ – ಬಿಸಿಎಂ ಇಲಾಖೆ ಅಧಿಕಾರಿಶ್ರೀ ದೇವರಾಜ್ – ಗ್ರಾಮ ಆಡಳಿತ ಅಧಿಕಾರಿ, ಕರಮುಡಿಶ್ರೀ ಅಬ್ದುಲ್ ಗಫರ್ – ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ಬೇವೂರುಈ ಅಧಿಕಾರಿಗಳ ಸೇವೆಯನ್ನು ಕೊಂಡಾಡಿ ತಾಲೂಕಿನ ಜನತೆಯ ಪರವಾಗಿ ಅಭಿನಂದನೆಗಳು ವ್ಯಕ್ತಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕಾರ್ಯಾಲಯದ ಅಧಿಕಾರಿಗಳು, ವಿವಿಧ ಇಲಾಖೆಗಳ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವರದಿ: ಶಶಿಧರ್ ಹೊಸಮನಿ, ಕೊಪ್ಪಳ ಜಿಲ್ಲೆ, ಯಲಬುರ್ಗಾ


