Shopping cart

Subtotal $0.00

View cartCheckout

Shopping cart

Subtotal $0.00

View cartCheckout

  • Home
  • ಶಿವಮೊಗ್ಗ
  • ಶಿವಮೊಗ್ಗದಲ್ಲಿ ದುರ್ಘಟನೆ: ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ – ಸ್ಥಳದಲ್ಲೇ ಸಾವು
ಶಿವಮೊಗ್ಗ

ಶಿವಮೊಗ್ಗದಲ್ಲಿ ದುರ್ಘಟನೆ: ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ – ಸ್ಥಳದಲ್ಲೇ ಸಾವು

Spread the love

ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿ ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.ಕಾರ್ಕಳ ಮೂಲದ ಲಾವಣ್ಯ (25) ಎಂಬ ವಿದ್ಯಾರ್ಥಿನಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ವಾಟರ್ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದು ಅವರ ಮೇಲೆ ಹರಿದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ವೇಳೆ ದ್ವಿಚಕ್ರ ವಾಹನದಲ್ಲಿದ್ದ ಓವೇರಿಯಾ ಎಂಬ ಮತ್ತೊಬ್ಬ ಯುವತಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ನೀರು ಪೂರೈಕೆ ಮಾಡುತ್ತಿದ್ದ ಟ್ಯಾಂಕರ್ ಲಾರಿಯಿಂದಲೇ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿ ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.ಈ ದುರ್ಘಟನೆ ಆಸ್ಪತ್ರೆ ಆವರಣದಲ್ಲೇ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದ್ದು, ಆಸ್ಪತ್ರೆ ಆವರಣದಲ್ಲಿ ವಾಹನ ಸಂಚಾರದ ನಿಯಂತ್ರಣ ಕುರಿತು ಸಾರ್ವಜನಿಕರು ಪ್ರಶ್ನೆ ಎತ್ತುತ್ತಿದ್ದಾರೆ.

ವರದಿ : ಶಶಿಕುಮಾರ್ ಜಿಲ್ಲಾ ವರದಿಗಾರರು

Leave a Reply

Your email address will not be published. Required fields are marked *

Related Posts