Shopping cart

Subtotal $0.00

View cartCheckout

Shopping cart

Subtotal $0.00

View cartCheckout

  • Home
  • ಹಬ್ಬಗಳು
  • ಹೋಳಿ ಹಬ್ಬದಲ್ಲಿ ಅಭಿಮಾನಿಗಳೊಂದಿಗೆ ಕುಣಿದು ಕುಪ್ಪಳಿಸಿದ ಮಹೇಂದ್ರ ತಮ್ಮಣ್ಣವರ್
ಹಬ್ಬಗಳು

ಹೋಳಿ ಹಬ್ಬದಲ್ಲಿ ಅಭಿಮಾನಿಗಳೊಂದಿಗೆ ಕುಣಿದು ಕುಪ್ಪಳಿಸಿದ ಮಹೇಂದ್ರ ತಮ್ಮಣ್ಣವರ್

Spread the love

ರಾಯಬಾಗ ತಾಲೂಕು ಹಾರೂಗೇರಿ ಪಟ್ಟಣದಲ್ಲಿ ಇಂದು ಹೋಳಿ ಹಬ್ಬದ ಸಂಭ್ರಮ ಕಳೆಗಟ್ಟಿತ್ತು. ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಆವರಣದಲ್ಲಿ ಆಯೋಜಿಸಲಾದ ಬಣ್ಣದ ಹಬ್ಬದಲ್ಲಿ ಕುಡಚಿ ಕ್ಷೇತ್ರದ ಶಾಸಕ ಮಹೇಂದ್ರ ತಮ್ಮಣ್ಣವರ್ ಕುಟುಂಬ ಸಮೇತರಾಗಿ ಭಾಗವಹಿಸಿ ಅಭಿಮಾನಿಗಳೊಂದಿಗೆ ಸಂಭ್ರಮಿಸಿದರು.

ಶಾಸಕರ ನೇತೃತ್ವದಲ್ಲಿ ಅವರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಬೃಹತ್ ವೇದಿಕೆಯನ್ನು ಸಿದ್ಧಪಡಿಸಿ ಡಿಜೆ ಸಂಗೀತದ ನಡುವೆ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು.

ಕುಡಚಿ ಮತಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಅಭಿಮಾನಿಗಳು ಒಬ್ಬರಿಗೊಬ್ಬರು ಬಣ್ಣ ಹಚ್ಚಿಕೊಂಡು ಹೋಳಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ವೇದಿಕೆಯ ಮೇಲೆ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಶಾಸಕರಿಗೆ ಬಣ್ಣ ಹಚ್ಚಿ ಹಬ್ಬದ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಶಾಸಕ ಮಹೇಂದ್ರ ತಮ್ಮಣ್ಣವರ್ ತಮ್ಮ ಧರ್ಮಪತ್ನಿ ಮತ್ತು ಮಗಳೊಂದಿಗೆ ಡಿಜೆ ಹಾಡುಗಳಿಗೆ ಹೆಜ್ಜೆ ಹಾಕಿ, ಅಭಿಮಾನಿಗಳೊಂದಿಗೆ ಬೆರೆತು ಹಬ್ಬವನ್ನು ಖುಷಿಯಿಂದ ಆಚರಿಸಿದರು.

ಹಾರೂಗೇರಿ ಪಟ್ಟಣದಲ್ಲಿ ನಡೆದ ಈ ಬಣ್ಣದ ಹಬ್ಬ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ವಿಶೇಷ ಗಮನಸೆಳೆದಿದ್ದು, ಅಭಿಮಾನಿಗಳ ಉತ್ಸಾಹದಿಂದ ಸಂಭ್ರಮ ದ್ವಿಗುಣಗೊಂಡಿತ್ತು.

Leave a Reply

Your email address will not be published. Required fields are marked *

Related Posts