Shopping cart

Subtotal $0.00

View cartCheckout

Shopping cart

Subtotal $0.00

View cartCheckout

  • Home
  • ಜಿಲ್ಲೆ
  • ಭೂಮಿ ಅಕ್ರಮ ಸ್ವಾಧೀನ ವಿರೋಧಿಸಿ ಮಳವಳ್ಳಿಯಲ್ಲಿ ಪ್ರಾಂತ ರೈತ ಸಂಘದ ಪ್ರತಿಭಟನೆ….!
ಜಿಲ್ಲೆ

ಭೂಮಿ ಅಕ್ರಮ ಸ್ವಾಧೀನ ವಿರೋಧಿಸಿ ಮಳವಳ್ಳಿಯಲ್ಲಿ ಪ್ರಾಂತ ರೈತ ಸಂಘದ ಪ್ರತಿಭಟನೆ….!

Spread the love

ಮಳವಳ್ಳಿ:ರೈತರ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಳ್ಳುತ್ತಿರುವ ಸರ್ಕಾರದ ನೀತಿಯನ್ನು ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಮಳವಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರಾಂತ ರೈತ ಸಂಘದ ಅಧ್ಯಕ್ಷ ಮಹದೇವು ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಮಾತನಾಡಿದ ಪ್ರಾಂತ ರೈತ ಸಂಘದ ಉಪಾಧ್ಯಕ್ಷ ಲಿಂಗರಾಜುಮೂರ್ತಿ ಅವರು, ರೈತರ ಒಪ್ಪಿಗೆ ಪಡೆಯದೆ ಅವರ ಜಮೀನುಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಬಳಿಕ ಆ ಭೂಮಿಯನ್ನು ಖಾಸಗಿ ಕಂಪನಿಗಳಿಗೆ ಮಾರಾಟ ಮಾಡುವ ಮೂಲಕ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.ರೈತರಿಂದ ಪಡೆದ ಭೂಮಿಗೆ ಕಡಿಮೆ ಪರಿಹಾರ ನೀಡಲಾಗುತ್ತಿದೆ.

ಆದರೆ ಅದೇ ಭೂಮಿಯನ್ನು ಸರ್ಕಾರ ಖಾಸಗಿ ಕಂಪನಿಗಳಿಗೆ ಎಕರೆಗೆ ಸುಮಾರು ಒಂದೂವರೆ ಕೋಟಿ ರೂಪಾಯಿಗೆ ಮಾರಾಟ ಮಾಡುತ್ತಿದೆ. ಈ ಮೂಲಕ ದೊಡ್ಡ ಮಟ್ಟದ ದಂಧೆ ನಡೆಯುತ್ತಿದೆ ಎಂದು ಲಿಂಗರಾಜುಮೂರ್ತಿ ಆರೋಪಿಸಿದರು.ರೈತರ ಹಿತಾಸಕ್ತಿಯನ್ನು ಕಾಪಾಡುವ ಬದಲು ಸರ್ಕಾರ ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡುತ್ತಿದೆ. ರೈತರ ಜಮೀನುಗಳನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವ ನೀತಿಯನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಭರತ್ ರಾಜ್, ತಾಲೂಕು ಅಧ್ಯಕ್ಷ ಮಹದೇವು, ಗುರುಸ್ವಾಮಿ, ಲಿಂಗರಾಜುಮೂರ್ತಿ, ಪ್ರಕಾಶ್, ಪ್ರಮೀಳಾ, ಪದ್ಮಮ್ಮ ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

Related Posts