
ತಾಲ್ಲೂಕಿನ ಉತ್ನಾಳ ಎಲ್ ಟಿ ರಾಮನಗರದಲ್ಲಿ ಶ್ರೀ ಸಂತ ಸೇವಾಲಾಲ್ ಅವರ 287ನೇ ಜಯಂತ್ಯೋತ್ಸವವನ್ನು ಭಕ್ತಿ ಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಸೋಮನಗೌಡ ಬಿ ಪಾಟೀಲ ಸಾಸನೂರ ಅವರು ಮಾತನಾಡಿ, ಸಂತ ಸೇವಾಲಾಲ್ ಅವರ ತತ್ವಗಳು ಸಮಾಜದ ಏಕತೆ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸಿವೆ ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡರಾದ ಪ್ರಭುಗೌಡ ಬಿ ಲಿಂಗದಹಳ್ಳಿ ಹಾಗೂ ಬಿಜೆಪಿ ಯುವ ಮುಖಂಡರಾದ ರೇವಣಸಿದ್ದ ಬಿ ಮಣ್ಣೂರ ಅವರು ಕೂಡ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಸಂತ ಸೇವಾಲಾಲ್ ಅವರ ಆದರ್ಶಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ, ಸಿದ್ದರಾಮಯ್ಯ ಮಠ, ಗ್ರಾಮ ಪಂಚಾಯತ್ ಸದಸ್ಯ ಮೋಹನ ಪವಾರ, ಯಶವಂತ ಸುಬ್ಬು ಪವಾರ, ಗುಲಾಬ ಶೇವ ರಾಠೋಡ, ಬಾಬು ರಾಠೋಡ, ಗುಲಾಬ ಶಂಕರ ಪವಾರ, ಮೋತಿಲಾಲ್ ಹಣಮಂತ ರಾಠೋಡ ಸೇರಿದಂತೆ ಅನೇಕ ಸಮಾಜದ ಮುಖಂಡರು, ಯುವಕರು ಹಾಗೂ ತಾಯಂದಿರು ಭಾಗವಹಿಸಿದ್ದರು.



