Shopping cart

Subtotal $0.00

View cartCheckout

Shopping cart

Subtotal $0.00

View cartCheckout

  • Home
  • ಜಿಲ್ಲೆ
  • ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರು ಸಾ*ವು!
ಜಿಲ್ಲೆ

ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರು ಸಾ*ವು!

Spread the love

ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ರಾಜೂರು ಗ್ರಾಮದ ಸಮೀಪ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಾಗಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಕೊಪ್ಪಳ ಕಡೆಯಿಂದ ಬರುತ್ತಿದ್ದ ಬೈಕ್ ಮತ್ತು ಯಲಬುರ್ಗಾ ಕಡೆಯಿಂದ ಸಾಗುತ್ತಿದ್ದ ಸಿಮೆಂಟ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರ್ಘಟನೆ ನಡೆದಿದೆ.ಮೃತರನ್ನು ಯಲಬುರ್ಗಾ ತಾಲೂಕಿನ ಬಳೂಟಿಗಿ ಗ್ರಾಮದ ನಿವಾಸಿಗಳಾದಶಂಕ್ರಪ್ಪ ತುತ್ತುರೊಟ್ಟಿ (48) ಹಾಗೂ ಬಸಪ್ಪ ಗೊಗೇರಿ (55) ಎಂದು ಗುರುತಿಸಲಾಗಿದೆ.ಇವರು ಕೊಪ್ಪಳದಿಂದ ಯಲಬುರ್ಗಾ ಮಾರ್ಗವಾಗಿ ತಮ್ಮ ಊರಿಗೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಧಾವಿಸಿದ ಕುಕನೂರು ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕುಕನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ವರದಿ: ಶಶಿಧರ ಹೊಸಮನಿ, ಕೊಪ್ಪಳ ಜಿಲ್ಲೆ ಯಲಬುರ್ಗಾ

Leave a Reply

Your email address will not be published. Required fields are marked *

Related Posts