Shopping cart

Subtotal $0.00

View cartCheckout

Shopping cart

Subtotal $0.00

View cartCheckout

  • Home
  • ಜಿಲ್ಲೆ
  • ಶಿವಮೊಗ್ಗ: ಮೇ 3ರಂದು ಪತ್ರಕರ್ತರ ಧ್ವನಿ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ!
ಜಿಲ್ಲೆ

ಶಿವಮೊಗ್ಗ: ಮೇ 3ರಂದು ಪತ್ರಕರ್ತರ ಧ್ವನಿ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ!

Spread the love

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ 2ನೇ ವಾರ್ಷಿಕೋತ್ಸವ ಹಾಗೂ ಪತ್ರಿಕಾ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಮೇ 3, 2026ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ನಗರದ ಬಾಲರಾಜ್ ಅರಸ್ ರಸ್ತೆಯ ಮಥುರಾ ಪ್ಯಾರಡೈಸ್ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಈ ಸಂದರ್ಭದಲ್ಲಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ವಿಶೇಷವಾಗಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಹಾಗೂ ಸಂಘದ ಸದಸ್ಯರ ಮಕ್ಕಳನ್ನು ಸೇರಿಸಿ ಒಟ್ಟು 25 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತದೆ.ಇದೇ ವೇಳೆ ಉತ್ತಮ ವರದಿ ನೀಡಿದ 10 ಮಂದಿ ಪತ್ರಕರ್ತರು ಹಾಗೂ 5 ಮಂದಿ ಸಂಪಾದಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ. ಜೊತೆಗೆ ಪತ್ರಿಕಾ ವಿತರಕರ ಸಂಘದ ಮುಖ್ಯಸ್ಥರು ಮತ್ತು ಗಣ್ಯರನ್ನು ಗೌರವಿಸಲಾಗುತ್ತದೆ.ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತರಾದ ಸಿ.ವಿ. ರಾಘವೇಂದ್ರರಾವ್, ಕಾಮ್ರೇಡ್ ಲಿಂಗಪ್ಪ, ಛಾಯಾಗ್ರಾಹಕ ನಂದನ್, ವರದಿಗಾರರಾದ ಶಶಿಧರ, ಅನಿಲ್ ಹಾಗೂ ಸಾಗರದ ಓಂಕಾರ್ ತಾಳಗುಪ್ಪ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ.ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ಹಾಗೂ ಸಂಘದ ಮಾಧ್ಯಮ ಸಲಹೆಗಾರ ಜಗಳೂರು ಲಕ್ಷ್ಮಣರಾವ್ ಉದ್ಘಾಟಿಸಲಿದ್ದು, ಸಂಘದ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಘಟಕದ ಅಧ್ಯಕ್ಷ ಡಿ.ಜಿ. ನಾಗರಾಜ (ರಾಜು) ವಹಿಸಲಿದ್ದಾರೆ.ಮೀಡಿಯಾ ಮತ್ತು ನಾನ್ ಮೀಡಿಯಾ ಎಂಬ ತಾರತಮ್ಯವಿಲ್ಲದೆ ಜಿಲ್ಲೆಯ ಎಲ್ಲಾ ಪತ್ರಕರ್ತರು, ಸಂಘಟನೆಗಳ ಪದಾಧಿಕಾರಿಗಳು ಹಾಗೂ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ಎಲ್ಲರೂ ಆಗಮಿಸಿ ಸಹಕರಿಸುವಂತೆ ಸಂಘದ ವತಿಯಿಂದ ಮನವಿ ಮಾಡಲಾಗಿದೆ.ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 8.30ರಿಂದ 9.30ರವರೆಗೆ ಉಪಹಾರ ಮತ್ತು ನಂತರ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ. ಸದಸ್ಯರು ಕುಟುಂಬ ಸಮೇತರಾಗಿ ಭಾಗವಹಿಸುವಂತೆ ಕೋರಲಾಗಿದೆ

ಡಿ.ಜಿ. ನಾಗರಾಜ (ರಾಜು), ಜಿಲ್ಲಾ ಅಧ್ಯಕ್ಷರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಶಿವಮೊಗ್ಗ ಘಟಕ

Leave a Reply

Your email address will not be published. Required fields are marked *

Related Posts