Shopping cart

Subtotal $0.00

View cartCheckout

Shopping cart

Subtotal $0.00

View cartCheckout

  • Home
  • ಜಿಲ್ಲೆ
  • ಹಸೆಮಣೆ ಏರಬೇಕಿದ್ದ ವರ ರಸ್ತೆ ಅಪಘಾತದಲ್ಲಿ ದುರ್ಮರಣ!
ಜಿಲ್ಲೆ

ಹಸೆಮಣೆ ಏರಬೇಕಿದ್ದ ವರ ರಸ್ತೆ ಅಪಘಾತದಲ್ಲಿ ದುರ್ಮರಣ!

Spread the love

ಬೇಲೂರು: ಮದುವೆಯ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಮನೆಯಲ್ಲೇ ಹೃದಯವಿದ್ರಾವಕ ದುರಂತ ಸಂಭವಿಸಿದೆ. ಹಸೆಮಣೆ ಏರಬೇಕಿದ್ದ ಯುವಕ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬೇಲೂರು ತಾಲೂಕಿನಲ್ಲಿ ನಡೆದಿದೆ.ಮೃತರನ್ನು ಮನು ಎಲ್.ಎನ್. (29) ಎಂದು ಗುರುತಿಸಲಾಗಿದೆ. ಇವರು ತಾಲೂಕಿನ ಲಕ್ಕುಂದ ಗ್ರಾಮದ ದರ್ಬಾರ್ ಪೇಟೆ ನಿವಾಸಿಯಾಗಿದ್ದು, ಮೇ 10, 2026ರಂದು ಇವರ ವಿವಾಹ ನಿಗದಿಯಾಗಿತ್ತು.

ಮದುವೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.ಇಂದು ಬೆಳಿಗ್ಗೆ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದ ಬಳಿ ಈ ಅಪಘಾತ ನಡೆದಿದೆ. ಪ್ರೀ-ವೆಡ್ಡಿಂಗ್ ಶೂಟ್‌ಗಾಗಿ ವಧುವನ್ನು ಕರೆತರಲು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮನು ಅವರ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಮನು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮದುವೆಯ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಕ್ಷಣಾರ್ಧದಲ್ಲಿ ಶೋಕದ ವಾತಾವರಣ ಆವರಿಸಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮನಕಲುಕುವಂತಿದೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

Related Posts